Home
ಕುಡಿಯುವ ನೀರಿನ ಸಮಸ್ಯೆಗಾಗಿ ಶ್ರೀ.ಟಿ.ಸಿ.ರಂಗಸ್ವಾಮಿ ( ದೂರವಾಣಿ ಸಂಖ್ಯೆ: 08376-282382, 9740201141) ಕಿರಿಯ ಅಭಿಯಂತರರು ಪ.ಪಂ.ಹಿರೇಕೆರೂರು, ಇವರನ್ನು ಸಂಪರ್ಕಿಸಿ.
2008-09 ನೇ ಸಾಲಿನ ಪ್ರಗತಿ ಸಾಧಿಸರುವ ಬಗ್ಗೆ ಪ್ರಶಂಸಾ ಪತ್ರಿಕೆ
"Best Practise Award-2010", Special Award to Hirekerur town Panchayat''
2010-11 ನೇ ಸಾಲಿನ ವಾಜಪೇಯಿ ವಸತಿ ಯೋಜನೆಯಡಿಯಲ್ಲಿ ನಿರ್ಮಾಣಗೊಂಡ ವಸತಿ ಗೃಹಗಳು ![]()

ಹಿರೇಕೆರೂರ ಪಟ್ಟಣ ಪಂಚಾಯತ ಇದು ಭಾರತ ದೇಶದ, ಕರ್ನಾಟಕ ರಾಜ್ಯದ ಹಾವೇರಿ ಜಿಲ್ಲೆಯಲ್ಲಿ ಇದೆ.ಹಿರೇಕೆರೂರ ಈ ಹೆಸರಿನ ಅರ್ಥ ಏನೆಂದರೆ "ಹಿರೇ"=ದೊಡ್ಡ, "ಕೆರೆ"=ಕೆರೆ/ಹಳ್ಳ, "ಊರು"=ಪಟ್ಟಣ/ಗ್ರಾಮ/ಊರು ಅಂದರೆ ದೊಡ್ಡ ಕೆರೆಯುಳ್ಳು ಊರು ಎಂದರ್ಥ.ಈ ಪಟ್ಟಣ ಪಂಚಾಯತವನ್ನು ದಿನಾಂಕ:12-01-1996 ರಂದು ಸ್ಥಾಪನೆ ಮಾಡಲಾಯಿತು. ಈ ಪಟ್ಟಣ ಪಂಚಾಯತದ ಒಟ್ಟು ಕ್ಷೇತ್ರ 5.00 ಚ.ಕಿ.ಮೀ ಇರುತ್ತದೆ. 2011ನೇ ಜನಗಣತಿಯ ಪ್ರಕಾರ ಇದರ ಜನ ಸಂಖ್ಯೆ 19186 ಇರುತ್ತದೆ. ಈ ಪಟ್ಟಣ ಪಂಚಾಯತದಲ್ಲಿ 16 ವಾರ್ಡಗಳಿದ್ದು, ಇದು 16 ಚುನಾಯಿತ ಸದಸ್ಯರನ್ನು ಒಳಗೊಂಡಿರುತ್ತದೆ. ಕರ್ನಾಟಕ ರಾಜ್ಯದಲ್ಲಿಯೇ ಪ್ರಸಿದ್ಧವಾದ ದುರ್ಗಾದೇವಿ ದೇವಸ್ಥಾನವು ಹಾವೇರಿ ಜಿಲ್ಲೆಯ ಹಿರೇಕೆರೂರ ಪಟ್ಟಣದಲ್ಲಿ ಇದೆ. ಈ ದೇವಿಯ ಜಾತ್ರೆಯು ಪ್ರತಿ ಮೂರು ವರ್ಷಕ್ಕೊಮ್ಮೆ ಫೆಬ್ರುವರಿ ತಿಂಗಳಲ್ಲಿ ನಡೆಯುತ್ತದೆ. ಈ ಜಾತ್ರೆಗೆ ಕರ್ನಾಟಕದ ಮೂಲೆ ಮೂಲೆಗಳಿಂದಲೊ ಜನರು ಆಗಮಿಸುತ್ತಾರೆ.
Hirekerur is a Panchayat Town in Haveri District in the Indian State of Karanataka. The Name Hirekerur Means "Hire"=Big, "Keri"= Pound/Lake, "Ur"=Village, Prounced as Hee Ray Kay Roor. The Town Panchayat Hirekerur was established on 12-01-1996. The total extent area of this town Panchayat is 4.00 Sq/Kms and the population as per 2001 census is 15,872. This town panchayat is consisted of 16 wards. The Durga Devi Temple is the famous temple in Hirekerur Town. For Every three years once thye are conducting Jatra Mahotsava
-: ಹಿರೇಕೆರೂರ ಪಟ್ಟಣ ಪಂಚಾಯಿತಿಯ ಪ್ರಮುಖ ಧ್ಯೇಯೋದ್ದೇಶಗಳು:-
- ಹಿರೇಕೆರೂರ ಪಟ್ಟಣದ ನಾಗರೀಕರ ಮೂಲಭೂತ ಅವಶ್ಯಕತೆಗಳಾದ ಶುದ್ಧ ಕುಡಿಯುವ ನೀರು,ಬೀದಿ ದೀಪ ಹಾಗೂ ಪರಿಸರ ನೈರ್ಮಲ್ಯದ ಬಗ್ಗೆ ಪಟ್ಟಣ ಪಂಚಾಯಿತಿಯು ಪ್ರಮುಖ ಆದ್ಯತೆ ನೀಡಿರುತ್ತದೆ.
- ಈ ನಿಟ್ಟಿನಲ್ಲಿ ಪಟ್ಟಣಕ್ಕೆ ವರಾಹಿ ಪಂಪ್ ಹೌಸ್ ನಿಂದ ಶುದ್ಧೀಕರಿಸಿದ ನೀರು ಸರಬರಾಜು ಮಾಡಲಾಗುತ್ತಿದೆ.
- ಪಟ್ಟಣದಲ್ಲಿ ದಿನ ನಿತ್ಯ ಸ್ವಚ್ಛತೆ ಕಾಪಾಡುವ ಸಲುವಾಗಿ ಪಟ್ಟಣದ ದೈನಂದಿನ ತ್ಯಾಜ್ಯವನ್ನು ಘನ ತ್ಯಾಜ್ಯ ವಿಲೇವಾರಿ ಸ್ಥಳಕ್ಕೆ ರವಾನಿಸಲಾಗುತ್ತಿದ್ದು ಪಟ್ಟಣದ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಮನೆ - ಮನೆಗಳಿಗೆ ಬೇಟಿ ನೀಡಿ ಕಸ ಸಂಗ್ರಹಿಸುವ ಕಾರ್ಯ ಪ್ರಗತಿಯಲ್ಲಿರುತ್ತದೆ. ಪಟ್ಟಣದಲ್ಲಿ ಸೊಳ್ಳೆಗಳ ಹಾವಳಿ ತಡೆಗಟ್ಟುವ ಉದ್ದೇಶದಿಂದ ಪ್ರತಿ ದಿನ ಫಾಗಿಂಗ್ ಮಾಡಲಾಗುತ್ತಿದೆ.
- ಸರ್ಕಾರದ ವಿವಿಧ ಯೋಜನೆಗಳಾದ ಎಸ್.ಎಫ್.ಸಿ.,,ಸಿ.ಎಂ.ಎಸ್.ಎಂ.ಟಿ.ಡಿ.ಪಿ ಹಾಗೂ ಇನ್ನಿತರ ಯೋಜನೆಗಳಡಿಯಲ್ಲಿ ಪಟ್ಟಣದ ಪ್ರಮುಖ ಅಭಿವೃದ್ಧಿ ಕಾರ್ಯಕ್ರಮಗಳಾದ ರಸ್ತೆ , ಚರಂಡಿ ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ.
- ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಹಾಗೂ ಬಡತನ ನಿರ್ಮೂಲನೆಯ ನಿಟ್ಟಿನಲ್ಲಿ 22.75%, 7.25%, 3%, ನಮ್ಮ ಮನೆ ವಸತಿ ಯೋಜನೆ ಹಾಗೂ ಎಸ್.ಜೆ.ಎಸ್.ಆರ್.ವೈ ಇತ್ಯಾದಿ ಯೋಜನೆಗಳಡಿಯಲ್ಲಿ ಹಿಂದುಳಿದ ವರ್ಗಗಳ, ಆರ್ಥಿಕವಾಗಿ ಹಿಂದುಳಿದವರ, ವಿಕಲ ಚೇತನರ ಅಭಿವೃದ್ಧಿಗಾಗಿ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿರುತ್ತದೆ.
- ಸಾರ್ವಜನಿಕ ಹಿತ ದೃಷ್ಟಿಯಿಂದ ಹಾಗೂ ಕಛೇರಿ ಕೆಲಸ ಕಾರ್ಯಗಳ ವ್ಯವಸ್ಥಿತ ನಿರ್ವಹಣೆಯ ಸದುದ್ದೇಶದಿಂದ ಹಿರೇಕೆರೂರ ಪಟ್ಟಣ ಪಂಚಾಯಿತಿ ಕಛೇರಿ ಆಡಳಿತ ವ್ಯವಸ್ಥೆಯನ್ನು ಗಣಕೀಕರಣಗೊಳಿಸುವ ಕಾರ್ಯ ಪ್ರಗತಿಯಲ್ಲಿರುತ್ತದೆ.
- ಈ ನಿಟ್ಟಿನಲ್ಲಿ ಕರ್ನಾಟಕ ಪೌರ ಸುಧಾರಣಾ ಯೋಜನೆಯಡಿ ಪೌರಾಡಳಿತ ನಿರ್ದೇಶನಾಲಯ, ಪೌರ ಸುಧಾರಣಾ ಕೋಶ, ಬೆಂಗಳೂರುರವರ ಸಹಯೋಗದೊಂದಿಗೆ ಈಗಾಗಲೇ ಹಲವಾರು ಮಾಹಿತಿಗಳನ್ನು ಗಣಕೀಕರಣಗೊಳಿಸಲಾಗಿದ್ದು ಪಟ್ಟಣದ ನಾಗರೀಕರೇ ತಮ್ಮ ಮಾಹಿತಿಯನ್ನ ಪಡೆಯಬಹುದಾದ ಸೌಲಭ್ಯ ಒದಗಿಸಲಾಗಿರುತ್ತದೆ.
ಕೆ.ಎಂ.ಆರ್.ಪಿ ಗಣಕೀಕರಣ ಯೋಜನೆಯ ಕಿರಿ ಪರಿಚಯ
ಪೌರಸುಧಾರಣಾ ಕೋಶದ ಮೇಲುಸ್ತುವಾರಿಯಲ್ಲಿ ಹಿರೇಕೆರೂರ ಪಟ್ಟಣ ಪಂಚಾಯಿತಿಯಲ್ಲಿ ಹಲವಾರು ಗಣಕೀಕರಣ ಯೋಜನೆಗಳು ಪೂರ್ಣಗೊಂಡಿರುತ್ತವೆ ಹಾಗೂ ಇನ್ನು ಕೆಲ ಗಣಕೀಕರಣ ಯೋಜನೆಗಳು ಪ್ರಗತಿಯಲ್ಲಿದ್ದು ಶೀಘ್ರದಲ್ಲಿ ಮುಕ್ತಾಯಗೊಂಡು ಸಾರ್ವಜನಿಕರ ಉಪಯೋಗಕ್ಕಾಗಿ ಲಭ್ಯವಾಗಲಿವೆ.ಈಗಾಗಲೇ ಬಹುತೇಕ ಮಾಹಿತಿಯನ್ನು ಕಛೇರಿ ವೆಬ್ ಸೈಟ್‌ನಲ್ಲಿ ಅಳವಡಿಸಲಾಗಿರುತ್ತದೆ.
- ಕಛೇರಿ ವೆಬ್‌ಸೈಟ್:ಹಿರೇಕೆರೂರ ಪಟ್ಟಣ ಪಂಚಾಯಿತಿಯು ತನ್ನದೇ ಆದ ವೆಬ್‌ಸೈಟ್ ಹೊಂದಿದ್ದು ಪಟ್ಟಣದ ಸಮಗ್ರ ಮಾಹಿತಿ ಇದರಲ್ಲಿ ಲಭ್ಯವಿರುತ್ತದೆ. ಕಛೇರಿಯ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆಯನ್ನು ಬಿಂಬಿಸುವ ಸದುದ್ದೇಶದಿಂದ ಪೌರಸುಧಾರಣಾ ಕೋಶ ಈ ವೆಬ್ ಸೈಟ್ ಅಭಿವೃದ್ಧಿ ಪಡಿಸಿದ್ದು ಹಿರೇಕೆರೂರ ಪಟ್ಟಣ ಪಂಚಾಯಿತಿಯಿಂದ ಈ ವೆಬ್ ಸೈಟ್ ನಿರ್ವಹಣೆ ಮಾಡಲಾಗುತ್ತಿದೆ. ಪ್ರಮುಖವಾಗಿ ಸಿಬ್ಬಂದಿ ಮಾಹಿತಿ, ಕೌನ್ಸಿಲ್ ಮಾಹಿತಿ, ಚುನಾಯಿತ ಪ್ರತಿನಿಧಿಗಳ ಮಾಹಿತಿ, ಟೆಂಡರ್ ಮಾಹಿತಿ, ಸಾರ್ವಜನಿಕ ಪ್ರಕಟಣೆ ಕಾಯ್ದೆ, ಮಾಹಿತಿ ಹಕ್ಕು, ಘನತ್ಯಾಜ್ಯ ವಸ್ತು ವಿಲೇವಾರಿ, ಮಳೆ ನೀರು ಕೊಯ್ಲು ಪದ್ಧತಿ, ಪಟ್ಟಣದ ರಸ್ತೆ, ಬೀದಿ ದೀಪ, ಚರಂಡಿ ಇತ್ಯಾದಿಗಳಿಗೆ ಸಂಬಂಧಿಸಿದ ಅಂಕಿ ಅಂಶಗಳು, ಪಟ್ಟಣದ ಹಣಕಾಸು ಪದ್ಧತಿ ವಿವರ, ಆಯ ವ್ಯಯ, ಸಭಾನಡವಳಿಗಳು ಇನ್ನು ಹತ್ತು ಹಲವು ಉಪಯುಕ್ತ ಮಾಹಿತಿ ಈ ವೆಬ್ ತಾಣದಲ್ಲಿ ಲಭ್ಯವಿರುತ್ತದೆ. ಪೌರ ಸುಧಾರಣಾ ಕೋಶದ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿ ನಿರ್ವಹಿಸಲಾಗುತ್ತಿರುವ ಎಲ್ಲಾ ಆನ್‌ಲೈನ್ ಅಪ್ಲಿಕೇಷನ್‌ಗಳು ಈ ವೆಬ್ ತಾಣದಲ್ಲಿ ದೊರೆಯುವಂತಿದ್ದು ಪಟ್ಟಣದ ನಾಗರೀಕರು ಈ ತಾಣಕ್ಕೆ ಬೇಟಿ ನೀಡಿ ಅವಶ್ಯ ಮಾಹಿತಿ ಪಡೆಯಬಹುದಾಗಿರುತ್ತದೆ.
- ಜನನ-ಮರಣ ದಾಖಲೆಗಳ ಆನ್ ಲೈನ್ ಅಪ್ಲಿಕೇಷನ್:1990ರಿಂದ ಇಲ್ಲಿಯವರೆಗಿನ ಪಟ್ಟಣದ ಎಲ್ಲಾ ಜನನ-ಮರಣ ದಾಖಲೆಗಳನ್ನು ಗಣಕೀಕರಣಗೊಳಿಸಲಾಗಿದ್ದು ಸಾರ್ವಜನಿಕರಿಗೆ ಗಣಕೀಕೃತ ಜನನ-ಮರಣ ದಾಖಲಾತಿಗಳನ್ನು ವಿತರಿಸಲಾಗುತ್ತಿದೆ. ಹಳೆಯ ಜನನ-ಮರಣ ದಾಖಲಾತಿಗಳ ಡಾಟಾ ಎಂಟ್ರಿ ಕಾರ್ಯ ಪ್ರಗತಿಯಲ್ಲಿದ್ದು ಶೀಘ್ರದಲ್ಲಿಯೇ ದಾಖಲಾತಿಗಳ ಗಣಕೀಕರಣ ಕಾರ್ಯ ಪೂರ್ಣಗೊಳ್ಳಲಿದೆ. ಇದರಿಂದ ಸಾರ್ವಜನಿಕರು ತ್ವರಿತವಾಗಿ ಜನನ-ಮರಣ ದಾಖಲಾತಿಗಳನ್ನು ಪಡೆಯುವಲ್ಲಿ ಸಹಕಾರಿಯಾಗಿದೆ.
- ಪಿ.ಜಿ.ಆರ್. ಆನ್ ಲೈನ್ ಅಪ್ಲಿಕೇಷನ್: ಪಟ್ಟಣದ ನಾಗರೀಕರ ದೈನಂದಿನ ಅವಶ್ಯಕತೆಗಳಾದ ಬೀದಿ ದೀಪ, ಕುಡಿಯುವ ನೀರು, ಸ್ವಚ್ಚತೆ ಇತ್ಯಾದಿ ಕುಂದುಕೊರತೆಗಳನ್ನು ತ್ವರಿತವಾಗಿ ಪರಿಹರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಕುಂದುಕೊರತೆಗಳ ಪರಿಹಾರ ಕೇಂದ್ರ ಸ್ಥಾಪಿಸಲಾಗಿರುತ್ತದೆ. ಈ ಕುಂದುಕೊರತೆ ಪರಿಹಾರ ಕೇಂದ್ರವು ಪ್ರತಿ ದಿನ ಮುಂಜಾನೆ 8.00 ರಿಂದ ಸಂಜೆ 8.00ರ ವರಗೆ ಕಾರ್ಯ ನಿರ್ವಹಿಸುತ್ತದೆ.ಸಾರ್ವಜನಿಕರು ಕುಂದುಕೊರತೆ ಪರಿಹಾರ ಕೇಂದ್ರದ ಸಹಾಯವಾಣಿ : 08376-282386 ಕ್ಕೆ ಕರೆ ಮಾಡಿ ದೂರು ನೊಂದಾಯಿಸಿಕೊಳ್ಳಬಹುದಾಗಿದೆ ಅಲ್ಲದೆ ತಮ್ಮ ದೂರಿನ ಸ್ಥಿತಿಯ ಬಗ್ಗೆ ತಿಳಿದುಕೊಳ್ಳಬಹುದಾಗಿದೆ. ಅದೇ ರೀತಿ ಈ ಕಛೇರಿ ವೆಬ್ ತಾಣಕ್ಕೆ ಬೇಟಿ ನೀಡಿ ಪಿ.ಜಿ.ಆರ್. ಆನ್‌ಲೈನ್ ಅಪ್ಲಿಕೇಷನ್ ಮುಖಾಂತರವೂ ದೂರು ನೊಂದಾಯಿಸಬಹುದಾಗಿರುತ್ತದೆ (ಆನ್‌ಲೈನ್ ಮುಖಾಂತರ ದೂರು ನೊಂದಾಯಿಸುವ ವಿಧಾನ) ಅಥವಾ ನೇರವಾಗಿ ಕುಂದು ಕೊರತೆ ಪರಿಹಾರ ಕೇಂದ್ರಕ್ಕೆ ಬೇಟಿ ನೀಡಿ ದೂರು ನೊಂದಾಯಿಸಬಹುದಾಗಿರುತ್ತದೆ. ದೂರು ಸ್ವೀಕರಿಸಿದ ನಂತರ ಕುಂದು ಕೊರತೆ ಪರಿಹಾರ ಕೇಂದ್ರದ ನಿರ್ವಾಹಕರು ಒಂದು " Unique Complaint Tracking Number " ನೀಡುವರು. ಇದರ ಸಹಾಯದಿಂದ ನಾಗರೀಕರು ತಮ್ಮ ದೂರಿನ ಸ್ಥಿತಿಯನ್ನು ತಿಳಿದುಕೊಳ್ಳಬಹುದಾಗಿದೆ. ದೂರು ಪರಿಹಾರ ಕಾರ್ಯದ ಪ್ರತಿ ಹಂತದ ಸ್ಥಿತಿಯನ್ನು ಇ-ಮೇಲ್ ಮೂಲಕ ಸಹ ಇ-ಮೇಲ್ ವಿಳಾಸ ನೊಂದಾಯಿಸಿ ಪಡೆಯಬಹುದಾಗಿರುತ್ತದೆ.
- ಭೌಗೋಳಿಕ ಆಸ್ತಿ ತೆರಿಗೆ ಪದ್ಧತಿ ಅನುಷ್ಟಾನ ಕಾರ್ಯ:ಪೌರ ಸುಧಾರಣಾ ಯೋಜನೆಯಡಿ ಹಿರೇಕೆರೂರ ಪಟ್ಟಣದಲ್ಲಿ ಭೌಗೋಳಿಕ ಆಸ್ತಿ ತೆರಿಗೆ ಪದ್ಧತಿ ಅನುಷ್ಟಾನ ಅತೀ ಪ್ರಮುಖ ಯೋಜನೆಯಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಪಟ್ಟಣದ ಎಲ್ಲಾ ಆಸ್ತಿಗಳ ಸರ್ವೆಕಾರ್ಯ ಪೂರ್ಣಗಳಿಸಿ, ಆಸ್ತಿಗಳ ವಿವರ (ನಮೂನೆ "ಸಿ") ಡಾಟಾ ಎಂಟ್ರಿ ಮಾಡಿಸಿ ಪೌರ ಸುಧಾರಣಾ ಕೋಶಕ್ಕೆ ಸಲ್ಲಿಸಲಾಗಿದ್ದು ಶೀಘ್ರದಲ್ಲಿಯೇ ಪೌರ ಸುಧಾರಣಾ ಕೋಶದಿಂದ ಆನ್‌ಲೈನ್ ಮಾಡಲಾಗುವುದು.ಇದರಿಂದ ಪಟ್ಟಣದ ಆಸ್ತಿಗಳನ್ನು ಸುಲಭವಾಗಿ ಪತ್ತೆ ಹಚ್ಚಬಹುದಾಗಿದ್ದು, ಆಸ್ತಿ ತೆರಿಗೆ ವಿವರ ಗಳನ್ನು ಸಹ ಸಾರ್ವಜನಿಕರು ಆನ್‌ಲೈನ್ ಮೂಲಕ ಪಡೆಯಬಹುದಾಗಿರುತ್ತದೆ ಹಾಗೂ ಆನ್ ಲೈನ್ ಮೂಲಕ ತೆರಿಗೆ ಆಸ್ತಿತೆರಿಗೆ ಪಾವತಿಸಬಹುದಾಗಿದ್ದು ಹಿರೇಕೆರೂರ ಪಟ್ಟಣದ ನಾಗರೀಕರು ಶೀಘ್ರದಲ್ಲಿಯೇ ಇದರ ಸದುಪಯೋಗ ಪಡೆದುಕೊಳ್ಳಲಿದ್ದಾರೆ.
- ನಿಧಿ ಆಧಾರಿತ ದ್ವಿ-ನಮೂದು ಸಂಚಯನ ಲೆಕ್ಕ ಪದ್ಧತಿ: ಹಿರೇಕೆರೂರ ಪಟ್ಟಣ ಪಂಚಾಯಿತಿ ಕಛೇರಿಯಲ್ಲಿ ನಿಧಿ ಆಧಾರಿತ ದ್ವಿನಮೂದು ಸಂಚಯನ ಲೆಕ್ಕ ಪದ್ಧತಿಯನ್ನು ಈಗಾಗಲೇ ಗಣಕೀಕರಣಗೊಳಿಸಲಾಗಿದ್ದು ಈ ಆನ್‌ಲೈನ್ ಅಪ್ಲಿಕೇಷನ್ ಮುಖಾಂತರ ನಗರ ಸ್ಥಳೀಯ ಸಂಸ್ಥೆಯ ಎಲ್ಲಾ ಯೋಜನೆಗಳ ಆರ್ಥಿಕ ಅಂಕಿ ಅಂಶಗಳನ್ನು ಕಛೇರಿಯ ಲೆಕ್ಕಿಗರು ದಿನಂಪ್ರತಿ ಅಪ್‌ಡೇಟ್ ಮಾಡುತ್ತಿದ್ದು ಕಛೇರಿಯ ಆಯ-ವ್ಯಯದ ಸಮರ್ಪಕ ನಿರ್ವಹಣೆಗೆ ಸಹಕಾರಿಯಾಗಿದೆ. ಈ ಆನ್‌ಲೈನ್ ಅಪ್ಲಿಕೇಷನ್ ಮುಖಾಂತರ ವಾರ್ಷಿಕ ಕಾರ್ಯ ನಿರ್ವಹಣಾ ವರದಿಯನ್ನೂ ಸಹ ಪಡೆಯಬಹುದಾಗಿದ್ದು ಕಛೇರಿಯ ಎಲ್ಲಾ ಆರ್ಥಿಕ ಚಟುವಟಿಕೆಗಳ ವಿವರ ಕಛೇರಿ ವೆಬ್‌ಸೈಟ್ ಮೂಲಕ ಅಂತರ್ಜಾಲದಲ್ಲಿ ಸಾರ್ವಜನಿಕರಿಗೆ ಲಭ್ಯವಿರುತ್ತದೆ.
ಇತರೆ ಆನ್‌ಲೈನ್ ಅಪ್ಲಿಕೇಷನ್‌ಗಳು: ಸಿ.ಎಂ.ಎಸ್.ಎಂ.ಟಿ.ಡಿ.ಪಿ, ಆಶಾಕಿರಣ ಮಾಹಿತಿ, ಎಸ್.ಜೆ.ಎಸ್.ಆರ್.ವೈ, ಎಸ್.ಎಲ್.ಬಿ, ನಮ್ಮ ಮನೆ ಇತ್ಯಾದಿ ಪ್ರಮುಖ ಆನ್ ಲೈನ್ ಅಪ್ಲಿಕೇಷನ್ ಗಳನ್ನು ಪೌರಸುಧಾರಣಾ ಕೋಶದ ಸಹಯೋಗದೊಂದಿಗೆ ಅಭಿವೃದ್ಧಿ ಪಡಿಸಲಾಗಿದ್ದು ಕಛೇರಿಯ ಸುಲಭ ನಿರ್ವಹಣೆಗೆ ಹಾಗೂ ಸಾರ್ವಜನಿಕ ಹಿತಾಸಕ್ತಿಯ ಮೇರೆಗೆ ಈ ಆನ್‌ಲೈನ್ ಅಪ್ಲಿಕೇಷನ್‌ಗಳ ಸದ್ಬಳಕೆ ಮಾಡಿಕೊಳ್ಳಲಾಗುತ್ತಿದೆ
Current News:
* ಕಾರ್ಮಿಕರ ದಿನಾಚರಣೆಯ ಅಂಗವಾಗಿ ಕಾರ್ಮಿಕರಿಗೆ ಕಾನೂನು ತಿಳುವಳಿಕೆ ಕಾರ್ಯಕ್ರಮ ದಿ:4-5-2012 ರಂದು ನಡೆಸಲಾಯಿತು![]()
*
| This page is maintained by : Chiefofficer, Hirekerur
Last Updated on 05-05-2012

